ನವದೆಹಲಿ:

ದೇಶದ ಜನರ ಬಹು ದಿನಗಳ ಬೇಡಿಕೆಯಾದ ಜನಲೋಕ್ ಪಾಲ್ ನೇಮಕಾತಿಗೆ ಆಯ್ಕೆ ಸಮಿತಿ ಸಭೆಗೆ ಇನ್ನು 10 ದಿನಗಳೊಳಗಾಗಿ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತಾಕೀತು ಮಾಡಿದೆ.
ಲೋಕ್ ಪಾಲ್ ಅಧ್ಯಕ್ಷರು, ನ್ಯಾಯಾಂಗ ಮತ್ತು ನ್ಯಾಯಾಂಗೇತರ ಸದಸ್ಯರ ನೇಮಕಾತಿ ಮಾಡಲು ಮೂರು ತಂಡಗಳ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದ್ದೇವೆ ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
ಸದ್ಯದಲ್ಲಿಯೇ ಲೋಕ್ ಪಾಲರ ನೇಮಕಕ್ಕೆ ಆಯ್ಕೆ ಸಮಿತಿಯ ಸಭೆ ನಡೆಸಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ)ಗೆ ಸೂಚಿಸಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
