ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಅಗ್ನಿ ದುರಂತ : 10 ಮಂದಿ ಸಾವು

ವಿಜಯವಾಡ:

     ಇತ್ತೀಚೆಗೆ ದುರಂತದ ಮೇಲೆ ದುರಂತಗಳು ನಡೆಯುತ್ತವೇ ಇವೆ. ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಉಂಟಾಗಿ 10 ಮಂದಿ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.

    ಇಂದು ನಸುಕಿನ ಜಾವ 5ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿಯತೊಡಗಿತು, ನಂತರ ಅದು ನೆಲಮಹಡಿ ಮತ್ತು ಮೊದಲ ಮಹಡಿಗೆ ವ್ಯಾಪಿಸಿತು. ಹೊಟೇಲ್ ನಿಂದ ದಟ್ಟ ಹೊಗೆ ಹೊರಸೂಸ ತೊಡಗಿತು. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರೊಂದಿಗೆ ಸ್ಥಳಕ್ಕೆ ದೌಡಾಯಿಸಿ 30 ಮಂದಿಯನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಕ್ಷಿಪ್ರ ಕಾರ್ಯಪಡೆ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದರು. ಹೊಟೇಲ್ ನ್ನು ಕೋವಿಡ್-19 ರೋಗಿಗಳ ಚಿಕಿತ್ಸೆಗೆ ವಿಜಯವಾಡ ನಗರ ಪಾಲಿಕೆ ಪಡೆದುಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

    ಸ್ಟೈರ್ ಕೇಸ್ ನ್ನು ಬಳಸಲು ಸಾಧ್ಯವಾಗದೆ ಅಗ್ನಿಶಾಮಕ ಸಿಬ್ಬಂದಿ ಕೋಣೆಗಳ ಕಿಟಕಿಗಳನ್ನು ಒಡೆದು ಏಣಿಗಳ ಸಹಾಯದಿಂದ 5 ಮಹಡಿಯ ಹೊಟೇಲ್ ನಿಂದ ಜನರನ್ನು ರಕ್ಷಿಸಲಾಯಿತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link