ದೆಹಲಿ
ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ರೌದ್ರ ರೂಪ ತೋರಿಸುತ್ತಿದ್ದು , ಕೇಜ್ರಿವಾಲ್ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ದೆಹಲಿಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ.ಇದೀಗ, ದೆಹಲಿ ಜಹಾಂಗೀರ್ ಪುರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ 14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ವೈದ್ಯರು ಮತ್ತು ನರ್ಸ್‌ಗಳು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,376ಕ್ಕೆ ಏರಿಕೆಯಾಗಿದೆ. ಈವರೆಗೂ ದೆಹಲಿಯಲ್ಲಿ 50 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ದೆಹಲಿಯಲ್ಲಿ 184, ಆಗ್ನೇಯ ದೆಹಲಿಯಲ್ಲಿ 130, ಪಶ್ಚಿಮ ದೆಹಲಿಯಲ್ಲಿ 122 ಜನರಿಗೆ ಸೋಂಕು ದೃಢವಾಗಿದೆ.
ಇದುವರೆಗೂ ದೆಹಲಿಯಲ್ಲಿ ಎರಡು ಆಸ್ಪತ್ರೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂಬ ಮಾಹಿತಿ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ