ಜಮ್ಮು:
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.ಘಟನೆ ನಡೆದ ಕೂಡಲೇ ಯಾವುದೇ ವದಂತಿಗಳು ಹರಡದಂತೆ ಜಿಲ್ಲೆಯಾದ್ಯಂತ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಶೋಪಿಯಾನ್‌ನ ಕೀಗಮ್ ಪ್ರದೇಶದಲ್ಲಿ ಜಂಟಿ ಶೋಧಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ