ಚುನಾವಣೆ ವೀಕ್ಷಿಸಲು 20 ದೇಶಗಳ ಪ್ರತಿನಿಧಿಗಳ ಆಗಮನ

0
5

ನವದೆಹಲಿ

     ಜಗತ್ತಿನ ಅತ್ಯಂತ ದೊಡ್ಡ ಪ್ರಜಾ ಪ್ರಭುತ್ವದ ಹಬ್ಬ ಎಂದೇ ಗುರುತಿಸಲ್ಪಟ್ಟಿರುವ ದೇಶದ ಚುನಾವಣಾ ವ್ಯವಸ್ಥೆಯ ಅಧ್ಯಯನಕ್ಕಾಗಿ 20 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಆಗಮಿಸಿದ್ದಾರೆ

     ರಾಜಧಾನಿಯಲ್ಲಿಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ಅವರನ್ನು ಭೇಟಿ ಮಾಡಿದ ಪ್ರತಿನಿಧಿಗಳು ಚುನಾವಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

      ವಿವಿಧ ದೇಶಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಅರೋರಾ, ಭಾರತ ಅತಿ ದೊಡ್ಡ ಪ್ರಜಾತಂತ್ರ ವ್ಯವಸ್ಥೆ ಹೊಂದಿದ್ದು, ಇಲ್ಲಿ ಚುನಾವಣೆ ನಡೆಸುವುದು ಬಹುದೊಡ್ಡ ಸವಾಲಾಗಿದೆ. ಚುನಾವಣೆ ನಡೆಸುವಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಈ ದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಲು ಆಯೋಗ ಬದ್ಧತೆ ಹೊಂದಿದೆ. ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಆಯೋಗ ಬದ್ಧವಾಗಿದೆ ಎಂದರು.

      ಚುನಾವಣೆಯಲ್ಲಿ ನೈತಿಕತೆ ತರಲು, ಚುನಾವಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಹೆಚ್ಚು ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡಲು ಆಯೋಗ ಪ್ರಯತ್ನಶೀಲವಾಗಿದೆ ಎಂದು ಸುನಿಲ್ ಅರೋರಾ ಹೇಳಿದ್ದಾರೆ. ವಿವಿಧ ದೇಶಗಳ ಪ್ರತಿನಿಧಿಗಳು ಏಳನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಪ್ರದೇಶಗಳಿಗೆ ತೆರಳುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಮ್ಮ ದೇಶಗಳಿಗೆ ತೆರಳಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

LEAVE A REPLY

Please enter your comment!
Please enter your name here