ಕಟ್ಟಡ ಕುಸಿತ : ಮೂವರ ದಾರುಣ ಸಾವು

ಡೆಹ್ರಾಡೂನ್:

       ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ  ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಘಟನಾ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಮೂವರನ್ನು ರಕ್ಷಿಸಲಾಗಿದೆ. ಮೂರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಇನ್ನಷ್ಟು ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ….. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link