ವಿಲೀನದೊಂದಿಗೆ ಎರಡನೆ ಅತಿ ದೊಡ್ಡ ಬ್ಯಾಂಕ್ ಜಾಲಾ ಸ್ಥಾಪನೆ : ನಿರ್ಮಲಾ ಸೀತಾರಾಮನ್

ನವದೆಹಲಿ

     ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಿ 11,431 ಶಾಖೆಗಳನ್ನು ಹೊಂದಿರುವ ದೇಶದ ಎರಡನೇ ಅತಿದೊಡ್ಡ ಬ್ಯಾಂಕಿಂಗ್ ಜಾಲವನ್ನು ರಚಿಸಲು ಸರ್ಕಾರ ಮುಂದಾಗಿದೆ.

     “ಪಂಜಾಬ್ ರಾಷ್ಟ್ರೀಯ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಅನ್ನು ವಿಲೀನಗೊಳಿಸಿದರೆ ಸರಿ ಸುಮಾರು 17.95 ಲಕ್ಷ ಕೋಟಿ ರೂ.ಗಳ ವ್ಯವಹಾರದೊಂದಿಗೆ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಅನ್ನು ರಚಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

      ಮುಂದಿನ ಐದು ವರ್ಷಗಳಲ್ಲಿ ಭಾರತವು 5 ಟ್ರಿಲಿಯನ್ ಆರ್ಥಿಕತೆಯಾಗಲು ಮುಂದಿನ ಪೀಳಿಗೆಯ ಬ್ಯಾಂಕುಗಳ ರಚನೆ ಅವಶ್ಯಕತೆ ಇದೆ ಎಂದು ಅವರು ಹೇಳಿದರು. ಹಣಕಾಸು ವಲಯವನ್ನು ಬಲಪಡಿಸಲು ಸರ್ಕಾರ ಕೈಗೊಂಡ ಕ್ರಮಗಳಿಂದಾಗಿ ಇಳಿದಿವೆ  2018 ರ ಡಿಸೆಂಬರ್‌ನಲ್ಲಿ 8.65 ಲಕ್ಷ ಕೋಟಿ ರೂ.ಗಳಿದ್ದ ಎನ್‌ಪಿಎಗಳು ಈಗ 7.90 ಲಕ್ಷ ಕೋಟಿಗೆ ಇಳಿದಿದೆ” ಎಂದಿದ್ದಾರೆ. ಸದ್ಯ ದೇಶದಲ್ಲಿರುವ 27 ಪಿ ಎಸ್ ಬಿಗಳನ್ನು 12ಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap