ಶ್ರೀನಗರ:
ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ರ ರದ್ಧತಿ ವೇಳೆ ಅಲ್ಲಿನ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರು ಗೃಹ ಬಂಧನಲ್ಲಿಟ್ಟಿದ್ದರು. ಈ ಆದೇಶದ ಪೈಕಿ ಮುಫ್ತಿ ಮೆಹಬೂಬಾ ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕರಾಗಿದ್ದಾರೆ. ಬಳಿಕ ಒಮರ್ ಅಬ್ದುಲ್ಲಾ ಸೇರಿದಂತೆ ಎಲ್ಲ ಪ್ರತ್ಯೇಕತಾವಾದಿ ನಾಯಕರನ್ನು ಸರ್ಕಾರ ಗೃಹ ಬಂಧನದಲ್ಲಿರಿಸಿತ್ತು.
ತಿಂಗಳ ಹಿಂದಷ್ಟೇ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಹಾಗೂ ಮಾಜಿ ಸಿಎಂ ಓಮರ್ ಅಬ್ದುಲ್ಲಾ, ಅವರ ತಂದೆ ಮಾಜಿ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ ಅವರನ್ನು ಷರತ್ಥು ಬದ್ಧ ಅನುಮತಿ ಮೇರೆಗೆ ಬಿಡುಗಡೆ ಮಾಡಲಾಗಿತ್ತು. ಇಂದು ಬೆಳಗ್ಗೆ ಮಾಜಿ ಪ್ರತ್ಯೇಕತಾವಾದಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಸಜ್ಜದ್ ಲೋನ್ ರನ್ನು ಕೂಡ ಗೃಹ ಬಂಧನದಿಂದ ಮುಕ್ತ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ