ಮುಂಬೈ:
ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. ಕಳೆದ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಈ ನಡುವೆ ಕಾರ್ಯಾಚರಣೆ ಮೇವಲೆ ಓರ್ವ ಸಿಬ್ಬಂದಿ ಗಾಯಗೊಂಡಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ. ಅಗ್ನಿ ರೌದ್ರನರ್ತನ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
