ಭೋಪಾಲ್:
ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ೆರಡೂ ರೈಲುಗಳ ಲೋಕೋ ಪೈಲಟ್ ಗಳು ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ಕಲ್ಲಿದ್ದಲು ಹೊತ್ತೊಯ್ಯುತ್ತಿದ್ದ ಎನ್ಟಿಪಿಸಿ(National Thermal Power Corporation) ರೈಲುಗಳು ಸಿಂಗ್ರಾವ್ಲೀ ಬಳಿ ಪರಸ್ಪರ ಡಿಕ್ಕಿ ಹೊಡೆದಿತ್ತು. ಪರಿಣಾಮ ರೈಲಿನ ಬೋಗಿಗಳು ಟ್ರ್ಯಾಕ್ನಿಂದ ಪಕ್ಕಕ್ಕೆ ಉರುಳಿಬಿದ್ದಿವೆ.
ದುರ್ಘಟನೆಯಲ್ಲಿ ಲೋಕೋ ಪೈಲಟ್ ಹಾಗೂ ಸಹಾಯಕ ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದು, ಓರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುರಂತ ಸ್ಥಳಕ್ಕೆ ಪೊಲೀಸರು ಹಾಗೂ ಎನ್ಟಿಪಿಸಿ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ