ಲಷ್ಕರ್-ಎ-ತೊಯ್ಬಾ ಸಂಘಟನೆಯೊಂದಿಗೆ ನಂಟು : ನಾಲ್ವರ ಬಂಧನ..!

ಶ್ರೀನಗರ:

     ಕಾಶ್ಮೀರದ ಶ್ರೀನಗರದಲ್ಲಿ ಎಲ್ ಎ ಟಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ಕು ಮಂದಿಯನ್ನು ಭದ್ರತಾ ಪಡೆ ಯೋಧರು ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಿದ್ದಾರೆ.

    ಲಷ್ಕರ್ ಎ ತೊಯ್ಬಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ನಾಲ್ವರನ್ನು ಪೊಲೀಸರು ಬದ್ಗಾಮ್ ಜಿಲ್ಲೆಯಲ್ಲಿ ಬಂಧಿಸಿ ಅವರ ಬಳಿಯಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

    ಬಂಧಿತರನ್ನು ವಸೀಮ್ ಗಣಿ, ಫಾರೂಕ್ ಅಹ್ಮದ್ ದಾರ್, ಮೊಹಮ್ಮದ್ ಯಾಸಿನ್ ಮತ್ತು ಅಜರುದ್ದೀನ್ ಮಿರ್ ಎಂದು ಗುರುತಿಸಲಾಗಿದೆ. ಇವರು ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಉಗ್ರರಿಗೆ ತಾತ್ವಿಕ ನೆರವು ಮತ್ತು ಆಶ್ರಯದ ನೆರವು ನೀಡುತ್ತಿದ್ದರು ಎಂದು ಪೊಲೀಸ್ ದಾಖಲೆಗಳು ಹೇಳುತ್ತವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ