ಭಾರತ: ಒಂದೇ ದಿನ 48,661 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ:

    ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

    ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.26ರವರೆಗೂ 1,62,91,331 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.ಈ ನಡುವೆ ದೇಶದಲ್ಲಿ ಕೊರೋನಾ ಆರ್ಭಟ ಮತ್ತಷ್ಟು ತೀವ್ರಗೊಂಡಿದ್ದು, ಒಂದೇ ದಿನ 48,661 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

   ಇದರೊಂದಿಗೆ ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 705 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 32,063ಕ್ಕೆ ತಲುಪಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap