ಗುಜರಾತ್
ಸುರೇಂದ್ರನಗರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ , ಓರ್ವನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ಸಂಭವಿಸಿದೆ. ಲಿಂಬ್ಡಿ-ಅಹಮದಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು , ಘಟನೆ ಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ .
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ