ನವದೆಹಲಿ:
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಮಿಳುನಾಡು ರಾಜ್ಯ ಬಿಜೆಪಿ ಮುಖ್ಯಸ್ಥೆ ತಮಿಳುಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರಯ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನುರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದ್ದು ಕೇರಳ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ಆಯ್ಕೆಯಾಗಿದ್ದಾರೆ.ಹೊಸ ರಾಜ್ಯಪಾಲರು ಆಯಾ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ನೇಮಕಾತಿಗಳು ಜಾರಿಗೆ ಬರುತ್ತವೆ ಎಂದು ರಾಷ್ಟ್ರಪತಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ