ನವದೆಹಲಿ:
15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆದಾಯ ಕೊರತೆ ಎದುರಿಸುತ್ತಿರುವ 14 ರಾಜ್ಯಗಳಿಗೆ ಹೆಚ್ಚುವರಿ ಸಂಪನ್ಮೂಲವಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.15 ನೇ ಹಣಕಾಸು ಆಯೋಗದ ಆರ್ಥಿಕ ಸಲಹಾ ಮಂಡಳಿಯು ಮುಂದಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020-21 ಮತ್ತು 2021-22ರ ಆರ್ಥಿಕ ವರ್ಷವನ್ನು ವಿಭಿನ್ನವಾಗಿ ಪರಿಗಣಿಸುವಂತೆ ಸೆಪ್ಟೆಂಬರ್ 5 ರಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತು.