ಸಿಎಎ ಪ್ರತಿಭಟನಾಕಾರರ 67 ಅಂಗಡಿ ಜಪ್ತಿ ಮಾಡಿದ ಯೋಗಿ ಆದಿತ್ಯ ನಾಥ್..!

ಮುಜಾಫರ್ ನಗರ:

    ಸಿಎಎ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೀಗ ಆ ಕೆಲಸಕ್ಕೆ ಮುಂದಾಗಿದ್ದಾರೆ. 

    ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ನಡೆದಿದ್ದ ಗಲಭೆಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಪ್ರತಿಭಟನಾಕಾರರ 67 ಅಂಗಡಿ ಗಳನ್ನು ಜಪ್ತಿ ಮಾಡಿದೆ . ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ದಂಗೆಕೋರರನ್ನು ಗುರುತಿಸಿ ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

    ಮುಜಾಫರ್ ನಗರದಲ್ಲಿ ಕಳೆದ ಶುಕ್ರವಾರ ಪ್ರಾರ್ಥನೆ ಬಳಿಕ ನಡೆದ ಗಲಭೆಯಲ್ಲಿ 20ಕ್ಕೂ ಹೆಚ್ಚು ಬೈಕ್, ಹಲವು ಕಾರುಗಳು ಮತ್ತು ಸಾರ್ವಜನಿಕ ಆಸ್ತಿಗಳಿಗೆ ಬೆಂಕಿ ಹಚ್ಚಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ 15ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾದ್ದವು ಈ ಎಲ್ಲಾ ಕಾರಣ ನೀಡಿ ಸುಮಾರು 67 ಅಂಗಡಿ ಜಪ್ತಿ ಮಾಡಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ