ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದ ಬಸ್ಸು : 7 ಸಾವು

 ಉತ್ತರಪ್ರದೇಶ:

        ಇಂದು ಬೆಳಗಿಇನ ಜಾವ ದೆಹಲಿಯನ್ನು ಸಂಪರ್ಕಿಸುವ ಆಗ್ರಾ – ಲಕ್ನೋ ಎಕ್ಸ್‌ ಪ್ರಸ್‌ ಹೈವೇಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ ಎಂದು ತಿಳಿದು ಬಂದಿದೆ.

        ಕರ್ಹಾಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಯಲ್ಲಿ ದೆಹಲಿಯಿಂದ ಬನಾರಸ್‌ ಕೊಡೆ ಹೊಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಎದುರು ಸಾಗುತ್ತಿದ್ದ ಟ್ರಕ್ಕಿಗೆ ಡಿಕ್ಕಿ ಹೊಡಡೆದ ಪರಿಣಾಮ ಬಸ್ಸಿನಲ್ಲಿದ್ದ ಏಳು ಜನ ಸಾವಿಗೀಡಾಗಿದ್ದಾರೆ ಮತ್ತು 34 ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ.

       ವೇಗವಾಗಿ ಸಾಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಟ್ರಕ್ಕಿಗೆ ಅಪ್ಪಳಿಸಿದ ಕಾರಣ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಮತ್ತು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸಪಡ ಬೇಕಾಯಿತು.ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link