7 ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರ..!

ಆಂಧ್ರ ಪ್ರದೇಶ:

     ಇತ್ತೀಚೆಗೆ ದೇಶದಲ್ಲಿ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ನೆರೆಯ ಅಂಧ್ರದಲ್ಲಿ ಒಂದನೆ ತರಗತಿ ಓದುತ್ತಿದ್ದ 7 ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ವೆಪಗುಂಟ ಉಪನಗರದಲ್ಲಿ ವರದಿಯಾಗಿದೆ.

     ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ತಂದೆ ಪೆಂಡುರ್ಥಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಮತ್ತು ಆರೋಪಿ ಬಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

       ವಿದ್ಯಾರ್ಥಿನಿಯು ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಾಳು . ಐಟಿಐ ಓದುತ್ತಿರುವ 16 ವರ್ಷದ ಬಾಲಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣದ ನಂತರ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap