ನವದೆಹಲಿ
2021ರಲ್ಲಿ ದೇಶಾದ್ಯಂತ ಕೈಗೊಳ್ಳಲಿರುವ ಜನಗಣತಿಯನ್ನು 16 ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಲೋಕಸಭೆಗೆ ಹೇಳಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿರುವ ಸಚಿವರು, . 2021ರಲ್ಲಿ ನಡೆಸಲಾಗುವ ಜನಗಣತಿಗಾಗಿ ವಿಶೇಷ ಮೊಬೈಲ್ ಅಪ್ಲಿಕೇಶನ್ ಬಳಸಲಾಗುವುದು. ತಾಂತ್ರಿಕ ಸಲಹಾ ಸಮಿತಿಯ ಸೂಚನೆಯ ಮೇರೆಗೆ ಜನಗಣತಿಯಲ್ಲಿ ಸ್ವಲ್ಪ ಬದಲಾವಣೆ ತರಲಾಗುವುದು ಎಂದು ಹೇಳಿದರು. 2021 ರ ಜನಗಣತಿಯ ಅಂದಾಜು ವೆಚ್ಚ 8,754 ಕೋಟಿ ರೂ. ಆಗಲಿದೆ ಎಂದು ಸಚಿವರು ಉತ್ತರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ