ಶೃಂಗೇರಿ:

ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಶ್ರೀ ಶಾರದಾ ಪೀಠಕ್ಕೆ ಭಕ್ತರು ತೆರಳುವುದಕ್ಕೆ ಅನುಮತಿ ನೀಡಬೇಕೆಂದು ಎಂದು ಕೋರಿ ಶೃಂಗೇರಿ ಶಾರದಾ ಪೀಠದ ಜಗದ್ಗುರು ಭಾರತೀ ತೀರ್ಥರು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.
ಅ.10ರಂದೇ ಪ್ರಧಾನಿಗಳಿಗೆ ಪತ್ರ ಬರೆದಿದ್ದ ಶ್ರೀಗಳು ವರ್ಷಕ್ಕೆ ಒಂದುಸಲವಾದರು ಶಾರದಾ ಪೀಠಕ್ಕೆ ತೆರಳಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಈ ವಿಷಯವಾಗಿ ಪಾಕಿಸ್ತಾನದೊಡನೆ ಮಾತುಕತೆ ನಡೆಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
