ಹೈದರಾಬಾದ್:

ತೆಲಂಗಾಣದಲ್ಲಿ ಮತ್ತೆ ಗುಲಾಬಿ ಕಾರು ತನ್ನ ಓಟ ಆರಂಭಿಸಿದ್ದು ತಾನು ಯಾರಿಗೂ ಬಗ್ಗುವುದಿಲ್ಲ ಎಂಬ ವಾಕ್ಯಕ್ಕೆ ಕೆಸಿಆರ್ ಮತ್ತೆ ಉದಾಹರಣೆಯಾಗಿ ಗೆದ್ದು ತೋರಿಸಿದ್ದಾರೆ ಇಂದು ಪೂರ್ವ ನಿಶ್ಚಯದಂತೆ ಪ್ರಮಾಣ ವಚನ ಸ್ವೀಕರಿಸಿದ ಕೆ ಚಂದ್ರಶೇಖರ ರಾವ್ ಅವರು ದೇವರ ಹೆಸರಿನ ಮೇಲೆ ಪ್ರಮಾಣ ಸ್ವೀಕರಿಸಿದ್ದಾರೆ.
ಹೈದರಾಬಾದ್ ನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಸಿಆರ್ ಅವರಿಗೆ ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಇನ್ನು ಚಂದ್ರಶೇಖರ ರಾವ್ ಅವರೊಂದಿಗೆ ಟಿಆರ್ ಎಸ್ ಹಿರಿಯ ಶಾಸಕ ಮಹಮದ್ ಅಲಿ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪೂರ್ಣ ಪ್ರಮಾಣದ ಮಂತ್ರಿಮಂಡಲವನ್ನು ಇದೇ ಡಿಸೆಂಬರ್ 18ರಂದು ರಚಿಸುವುದಾಗಿಯೂ ಅಂದೇ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಆರ್ ಎಸ್ ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
