ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಮಾರಾಟಕ್ಕಿವೆ..!

ನವದೆಹಲಿ:

     ಮುಂಬರುವ ಮಾರ್ಚ್ ಒಳಗಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಏರ್ ಇಂಡಿಯಾ ಹಾಗು ಬಿಪಿಸಿಎಲ್ ಅನ್ನು ಮಾರಾಟ ಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

    ಈ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ಕ್ರೋಢಿಕರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿದ್ದು ಇದೇ ಹಣಕಾಸು ವರ್ಷದಲ್ಲಿಯೇ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದ್ದಾರೆ.

    ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು. ಆದರೆ ಅಂದು ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ದೊರಯದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದರು.ತೆರಿಗೆ ಸಂಗ್ರಹ ಒತ್ತಡದ ಸ್ಥಿತಿಯಲ್ಲಿ ಈ ಬಂಡವಾಳ ಹಿಂದೆಗೆತ ಕ್ರಮದಿಂದ ಸರ್ಕಾರ ಆದಾಯ ಹೆಚ್ಚುವ ನಿರೀಕ್ಷೆ ಇದೆ. ಆರ್ಥಿಕ ಹಿಂಜರಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು ಹಲವು ವಲಯಗಳು ಒತ್ತಡದಿಂದ ಹೊರಬರುತ್ತಿವೆ ಎಂದರು. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap