ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ..!

ಮಹಾರಾಷ್ಟ್ರ:

    ಸುಪ್ರೀಂ ಕೋರ್ಟ್ ನ ತೀರ್ಪನ್ನು ಗೌರವಿಸಿ ನಾಳೆ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದ ಬೆನ್ನೆಲ್ಲೆ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಮತ್ತೊಂದು ದೊಡ್ಡ ಶಾಕ್ ತಗುಲಿದೆ.ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

        ಇಂದು ಸುಪ್ರೀಂ ಕೋರ್ಟ್ ನಾಳೆ ಸಂಜೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಸೂಚನೆ ನೀಡಿತ್ತು. ಅದಕ್ಕೂ ಮುನ್ನವೇ ಅಜಿತ್ ಪವಾರ್ ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ದೇವೇಂದ್ರ ಫಡ್ನವಿಸ್ ಗೆ ಸಲ್ಲಿಸಿದ್ದಾರೆ.

     ಸೋಮವಾರ ಶಿವಸೇನಾ, ಎನ್​ಸಿಪಿ ಹಾಗೂ ಕಾಂಗ್ರೆಸ್ ಶಾಸಕರು ಮುಂಬೈನ ಖಾಸಗಿ ಹೋಟೆಲ್ ನಲ್ಲಿ ಶಾಸಕರ ಪರೇಡ್ ನಡೆಸುವ ಮೂಲಕ ಮಾಧ್ಯಮದ ಮುಂದೆ ಶಕ್ತಿ ಪ್ರದರ್ಶಿಸಿದ್ದವು.  162 ಶಾಸಕರು ಈ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ  ತಮ್ಮ ಒಗ್ಗಟ್ಟನ್ನು ತೋರ್ಪಡಿಸಿದ್ದರು. ಇದರಿಂದಾಗಿ ಏಕಾಂಗಿಯಂತೆ ಕಂಡುಬಂದಿದ್ದ ಅಜಿತ್ ಪವಾರ್ ತಡರಾತ್ರಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ