ನೀತಿ ಸಂಹಿತೆ ಉಲ್ಲಂಘನೆ : ದೇಶಾದ್ಯಂತ 540 ಪ್ರಕರಣ ದಾಖಲು ..!!!

ನವದೆಹಲಿ:

        ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ನಂತರ ಇದುವರೆಗೆ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಅಂದಾಜು ೫೪೦ ಕೋಟಿ ರೂಪಾಯಿ ಬೆಲೆ ಬಾಳುವ ಬೇನಾಮಿ ನಗದು, ಅಕ್ರಮ ಮದ್ಯ, ಮಾದಕ ವಸ್ತು, ಬಂಗಾರ ಮತ್ತು ಉಡುಗೊರೆಗಳನ್ನು ಚುನಾವಣಾ ಆಯೋಗ ಜಪ್ತಿ ಮಾಡಿದೆ.

        ಚುನಾವಣಾ ಅಕ್ರಮ ಸಂಬಂಧ ಜಪ್ತಿ ಮಾಡಲಾದ ಪ್ರಕರಣಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದು, ಈ ರಾಜ್ಯದಲ್ಲಿ ೧೦೭ ಕೋಟಿ ರೂಪಾಯಿ ಬೆಲೆಬಾಳುವ ವಸ್ತುಗಳು ಜಪ್ತಾಗಿವೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶವಿದೆ. ಅಲ್ಲಿ ೧೦೪ ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಸ್ತುಗಳು ಮತ್ತು ಆಂಧ್ರಪ್ರದೇಶದಲ್ಲಿ ೧೦೩ ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಸ್ತುಗಳನ್ನು ಆಯೋಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

       ದೇಶಾದ್ಯಂತ ನಡೆಸಲಾಗಿರುವ ಕ್ಷಿಪ್ರ ಕಾರ್ಯಾಚರಣೆಗಳಲ್ಲಿ ಒಟ್ಟು ೧೪೩ ಕೋಟಿ ರೂಪಾಯಿ ಬೇನಾಮಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಅಧಿಕೃತ ಹೇಳಿಕೆ ನೀಡಿದೆ. ಇದಲ್ಲದೆ, ೧೬೨ ಕೋಟಿ ರೂಪಾಯಿ ಬೆಲೆ ಬಾಳುವ ಆಭರಣ, ೧೩೧ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ನಶೆ ಪದಾರ್ಥಗಳು, ೮೯ ಕೋಟಿ ರೂಪಾಯಿ ಮೌಲ್ಯದ ಮದ್ಯ ಹಾಗೂ ೧೨ ಕೋಟಿ ರೂಪಾಯಿ ಬೆಲೆಬಾಳುವ ಉಡುಗೊರೆಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap