ಅಹಮದಾಬಾದ್:
ನರೇಂದ್ರ ಮೋದಿಯವರ ತವರಾದ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹೊಡೆತ ಬಿದ್ದಿದೆ,ಅದೇನೆಂದರೆ 15 ರಿಂದ 20 ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ ಕಾಂಗ್ರೆಸಿಗ ಮತ್ತು ಓಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೊಸ ಬಾಂಬ್ ಸಿಡಿಸಿದ್ದಾರೆ.ಕಾಂಗ್ರೆಸ್‌ಗೆ ನಾಯಕತ್ವದ ಕೊರತೆ ಇದೆ.ಇದೇ ರೀತಿ ಮುಂದುವರಿದರೆ ಇನ್ನು 10 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಿಂದ ದೂರ ಉಳಿಯಬೇಕಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಗುಜರಾತ್ ನ ಪ್ರತಿಯೊಬ್ಬರಿಗೂ ಗೊತ್ತಿದೆ. ಎಲ್ಲರಿಗೂ ಅವರ ಬಗ್ಗೆ ಗೌರವವಿದೆ. ನಾನು ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ ಎಂದರು.ನನಗೆ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಬಾಂಧವ್ಯ ಇದೆಯಾದರೂ ನಾಯಕತ್ವದ ವಿಚಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾರೂ ಸಾಟಿಯಲ್ಲ. ಇದಕ್ಕೆ ಯಾರ ಪ್ರಮಾಣಪತ್ರದ ಅಗತ್ಯವೂ ಇಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
