ಅಮರಾವತಿ
ನೆರೆಯ ಆಂಧ್ರ ಪ್ರದೇಶದಲ್ಲಿ ಇರುವ ವೈಎಸ್ ಜಗನ್ ಸರ್ಕಾರ ಹೊಸ ದಾಖಲೆಯೊಂದನ್ನು ಸೃಷ್ಟಿಸಿದೆ. ಸುಮಾರು 1 ಲಕ್ಷ 26 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸುವ ಮೂಲಕ ಆಂಧ್ರಪ್ರದೇಶ ಸರ್ಕಾರ ಹೊಸ ದಾಖಲೆ ನಿರ್ಮಿಸಿದೆ ಎಂದು ಸರ್ಕಾರದ ಮಾಧ್ಯಮ ವಿಭಾಗ ತಿಳಿಸಿದೆ.ಇನ್ನು ಹೊಸದಾಗಿ ನೇಮಕಗೊಂಡವರಿಗೆ ಖುದ್ದು ಸಿಎಂ ಅವರೇ ಆದೇಶ ಪತ್ರ ವಿತರಿಸಿ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪಾದಯಾತ್ರೆ ಮೂಲಕ ಗ್ರಾಮೀಣಭಾಗದಲ್ಲಿನ ಸಮಸ್ಯೆ ಮತ್ತು ಬವಣೆಯನ್ನು ಕಂಡಿದ್ದೇನೆ ಆದ್ದರಿಂದ ಇನ್ನುಮೇಲೆ ನಮ್ಮ ರಾಜ್ಯದಲ್ಲಿ ಅಕ್ರಮ ಮಧ್ಯ ಮಾರಾಟ ಮತ್ತು ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ .
ಆಂಧ್ರಪ್ರದೇಶದಲ್ಲಿ ನಕಲಿ ಲೈಸೆನ್ಸ್ ಹೊಂದಿರುವ ಮದ್ಯದಂಗಡಿಗಳ ಮೇಲೆ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರವು ಪ್ರಹಾರ ಆರಂಭಿಸಿದೆ. ಸಂಪೂರ್ಣ ಮದ್ಯಪಾನ ನಿಷೇಧದತ್ತ ಮಹತ್ವದ ಹೆಜ್ಜೆ ಇಡುತ್ತಿದೆ.
ಇಂದಿನಿಂದ ರಾಜ್ಯದಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಸರ್ಕಾರ ವಶಕ್ಕೆ ಪಡೆಯಲಿದೆ ಮತ್ತು ಅವುಗಳು ಸರ್ಕಾರಿ ಸ್ವಾಮ್ಯದ ಆಂಧ್ರಪ್ರದೇಶ ಸ್ಟೇಟ್ ಬೆವರೇಜಸ್ ಕಾರ್ಪೊರೇಶನ್ ಲಿಮಿಟೆಡ್ ಅಧೀನದಲ್ಲಿರುತ್ತವೆ ಎಂದು ಉಪ ಮುಖ್ಯಮಂತ್ರಿ ಹಾಗು ಅಬಕಾರಿ ಸಚಿವ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ