10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಆಂಧ್ರ ಸರ್ಕಾರ..!

ಆಂಧ್ರಪ್ರದೇಶ:

     ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಇದರ ಭಯದಿಂದಾಗಿ  ಮಾರ್ಚ್‌ನಲ್ಲಿ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ನೀಡಿದೆ.

    ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಅವರು ಹೇಳುವ ಪ್ರಕಾರ “ರಾಜ್ಯ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ಏರುಮುಖದಲ್ಲಿಯೇ ಇದೆ . ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ರದ್ದು ಮಾಡಿಲಾಗಿದೆ ಮತ್ತು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

     ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೊರೋನಾಪ್ರಕರಣಗಳು ದಾಖಲಿಸಿದ್ದು, 96 ಜನ ಮೃತಪಟ್ಟಿದ್ದಾರೆ. 3,948 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 443 ಪ್ರಕರಣಗಳು ವರದಿಯಾಗಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link