ನವದೆಹಲಿ:
ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಅರ್ನಾಬ್ ಗೋಸ್ವಾಮಿ ವಿರುದ್ಧ ಹಾಕಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರಿಗೆ ಬಂಧನ ಭೀತಿಯಿಂದ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರದ ತನ್ನ ತೀರ್ಪಿನಲ್ಲಿ, ಮಧ್ಯಂತರ ರಕ್ಷಣೆಯನ್ನು ಇನ್ನೂ ಮೂರು ವಾರಗಳವರೆಗೆ ವಿಸ್ತರಿಸಿದೆ. ಪಾಲ್ಘರ್ ಪ್ರಕರಣ ಸೇರಿದಂತೆ ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚೆಗಳಲ್ಲಿ ಅವರ ಹೇಳಿಕೆ ಸಂಬಂಧ ನಡೆದ ವಿಚಾರಣೆಯಲ್ಲಿ ಈ ಆದೇಶ ನೀಡಲಾಗಿದೆ.
“ಅರ್ಜಿದಾರರ ವಿರುದ್ಧ ಮೂರು ವಾರಗಳವರೆಗೆ ಯಾವುದೇ ಬಲವಂತದ ಕ್ರಮದಿಂದ ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡುತ್ತದೆ” ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








