370ನೆ ವಿಧಿ ರದ್ದತ್ತಿ ಸರಿಯಲ್ಲ : ಶರದ್ ಪವಾರ್

ಮುಂಬೈ:

      ನಗರದಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರದ ಪವಾರ್ ಅವರು ರಾಜಕೀಯ ಲಾಭಕ್ಕಾಗಿ ಕೆಲ ರಾಜಕೀಯ ಪಕ್ಷಗಳು ಪಾಕಿಸ್ತಾನದ ಕುರಿತು ಸುಳ್ಳು ಸುದ್ದಿ ಹಬ್ಬಿತ್ತಿವೆ , ಪಾಕಿಸ್ತಾನೀಯರ ಕುರಿತು ತಪ್ಪು ಮಾಹಿತಿ ನೀಡಿ ಜನರ ಮನಸ್ಸಿನಲ್ಲಿ ದ್ವೇಶವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದಾರೆ.

    ಅಲ್ಪ ಸಂಖ್ಯಾತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾತನಾಡಿದ ಶರದ್ ಪವಾರ್, ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪಾಕಿಸ್ತಾನದ ಕುರಿತು ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಾ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

    ನಾನು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿನ ಜನರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಅವರು ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತಾರೆ , ಅಂತೆಯೇ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿದ ಪವಾರ್, ವಿಧಿ 370ರ ರದ್ಧತಿ ಮೂಲಕ ಅಲ್ಪ ಸಂಖ್ಯಾತರಲ್ಲಿ ಭಯದ ವಾತಾವರಣ ಮೂಡಿಸಿದೆ. ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ ಕಣಿವೆಯಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗಲು ಎಡೆ ಮಾಡುಕೊಡುತ್ತದೆ ಎಂದಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap