ತಿರುವನಂತಪುರಂ
ನವೆಂಬರ್ 16ರಂದು ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ ಎಂದು ಶಬರಿಮಲೆ ದೇವಸ್ಥಾನ ಮಂಡಳಿ ತಿಳಿಸಿದೆ .ನವೆಂಬರ್ 16ರಿಂದ ಎರಡು ತಿಂಗಳ ಕಾಲ ದೇವಾಲಯದ ಬಾಗಿಲು ತೆರೆಯಲಿದ್ದು . ಮೇಲಸಂತಿ ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಕಲಶಾಭಿಷೇಕ ನಡೆಸುವ ಮೂಲಕ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಗುತ್ತದೆ.
ಮಂಡಲ ಮಕರವಿಳಕ್ಕು ಅಂಗವಾಗಿ ದೇವಾಲಯದ ಬಾಗಿಲು ತೆರೆದ ಬಳಿಕ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಆಗಮಿಸಲಿದ್ದಾರೆ.ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು.