ನವದೆಹಲಿ:
ದೇಶದಲ್ಲಿ ಎರಡು ಅತಿ ಬಲಿಷ್ಠ ಸಮಾಜಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ರಂಜನ್ ಗಗೋಯ್ ಅವರು, ‘ಅಯೋಧ್ಯೆ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುವುದಿಲ್ಲ. ವಿಚಾರಣೆಯ ಅರ್ಜಿಗಳನ್ನು ಮಾತ್ರ ನಾವು ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಂತೆಯೇ ಸದ್ಯ, ಪ್ರಕರಣ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








