ನವದೆಹಲಿ:
ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಅಯೋಧ್ಯೆ ರಾಮಮಂದಿರ ವಿವಾದದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿ ಆದೇಶ ನೀಡಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾಗಿದ್ದ ಸಾರ್ವಜನವಿಕ ಹಿತಾಸಕ್ತಿಗಳ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸುವ ಬದಲು ಜ.10ಕ್ಕೆ ಮುಂದೂಡಿದೆ.