ಭಿಂಡ್:
ಪಾಕಿಸ್ತಾನದವ ಐಎಸ್ಐನಿಂದ ಬಿಜೆಪಿ ಮತ್ತು ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.
ಮಹಾರಾಣ ಪ್ರತಾಪ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿರುವ ದಿಗ್ವಿಜಯ್ ಬಿಜೆಪಿ ಹಾಗೂ ಬಜರಂಗ ದಳಕ್ಕೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾಗಿರುವ ಐಎಸ್ಐನಿಂದ ಹಣ ವರ್ಗಾವಣೆಯಾಗುತ್ತಿದೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
ದೇಶದಲ್ಲಿ ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ತಾನದ ಐಎಸ್ಐಗೆ ಸಹಾಯ ಮಾಡುತ್ತಿದ್ದಾರೆ. ಬಿಜೆಪಿ ಪಾಕಿಸ್ತಾನದ ಸಂಸ್ಥೆ ಐಎಸ್ಐನಿಂದ ಹಣ ಪಡೆಯುತ್ತಿದೆ. ಇದನ್ನೂ ಎಲ್ಲರೂ ಗಮನಿಸಬೇಕು. ಇದನ್ನೂ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.ದಿಗ್ವಿಜಯ್ ಸಿಂಗ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.
ವಿಡಿಯೋಗೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ದಿಗ್ವಿಜಯ್ ಸಿಂಗ್ ಅವರು, ಆರೋಪವನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, ಮಾಧ್ಯಮಗಳ ವಿರುದ್ಧ ಕಿಡಿಕಾರಿ, ಮಾಧ್ಯಮಗಳು ಪಕ್ಷಾತೀತವಾಗಿ ವರದಿ ಮಾಡುತ್ತಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
