ನವ ದೆಹಲಿ:
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿರುವ ಶಿವಸೇನಾ ಸರ್ಕಾರವನ್ನುಕೆಡವಲು ತೆರೆಮರೆಯ ಕಸರತ್ತು ನಡೆಸಲು ಹೋಗಿ ಬಿಜೆಪಿ ಕೈಸುಟ್ಟುಕೊಂಡಂತಿದೆ , ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ ಮಹಾರಾಷ್ಟ್ರದಲ್ಲಿನ ಮೈತ್ರಿ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವದ ಮಾತಲ್ಲಾ ಎಂದರಿತು ಆ ಕೆಲಸಕ್ಕೆ ಎಳ್ಳು ನೀರು ಬಿಟ್ಟಿದೆ ಎಂದು ಮೂಲಗಳು ತಿಳಿಸಿವೆ .
“ಮಹಾರಾಷ್ಟ್ರದಲ್ಲಿ ಸೈದ್ಧಾಂತಿಕ ವಿರೋಧಾಭಾಸಗಳು ಈಗ ಹೆಚ್ಚು ವಿಷಯವಲ್ಲ. ಧೀರ್ಘ ವರ್ಷಗಳ ಬಳಿಕ ಕಾಂಗ್ರೆಸ್ ಹಾಗೂ ಎನ್ ಸಿಪಿ ಅಧಿಕಾರಕ್ಕೆ ಬಂದಿವೆ. ಎರಡು ಪಕ್ಷಗಳೂ ಅಧಿಕಾರದ ಲಾಭಕ್ಕಾಗಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿವೆ. ಕರ್ನಾಟಕದಲ್ಲಿ ಆದ್ದಂತೆ ಮಹಾರಾಷ್ಟ್ರದ ರಾಜಕೀಯದಲ್ಲಿ ಬದಲಾವಣೆಯನ್ನು ನಿರೀಕ್ಷಿಸಲು ಆಗಲ್ಲ ಎಂದು ಬಿಜೆಪಿಯ ಹೇಳಲಿಚ್ಚಸದ ವ್ಯಕ್ತಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಆದ್ದಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯ ಹಾದಿ ದುರ್ಗಮವಾಗಿದೆ. ಆದ್ದರಿಂದ ಪಕ್ಷದ ಸಂಘಟನೆ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತಿದ್ದೆ ಎಂದು ಹೇಳುತ್ತಾರೆ.2024ರ ಲೋಕಸಭಾ ಚುನಾವಣೆಯತ್ತ ಗಮನ ಹರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರದ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಶಿವಸೇನಾ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಸಂಘಟಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








