ಕೋಲ್ಕತ :
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ ಚುನವಾಣೆಯಲ್ಲಿ ಎರಡಂಕಿ ತಲುಪುವ ಮೂಲಕ ಹೊಸ ಸಾಧನೆ ಮಾಡಿದೆ.
ಇಂದು ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದೀದಿಗೆ ಶಾಕ್ ನೀಡಿದೆ.ರಾಜ್ಯದಲ್ಲಿ ಬಿಜೆಪಿ ಪ್ರಭಾವಿ ನಾಯಕರು ನಡೆಸಿದ ಹಲವು ರೋಡ್ ಶೋಗಳು, ರಾಲಿಗಳ ಪರಿಣಾಮವಾಗಿ ಇಲ್ಲಿನ ಮತದಾರರು ಬಿಜೆಪಿಯತ್ತ ವಾಲಿರುವುದು ಈಗ ನಿಚ್ಚಳವಾಗುತ್ತಿದೆ.
ಪಶ್ಚಿಮ ಬಂಗಾಲದಲ್ಲಿ ಒಟ್ಟು 42 ಲೋಕಸಭಾ ಕ್ಷೇತ್ರಗಳಿವೆ. ಈ ಪೈಕಿ ಬಿಜೆಪಿ ಪ್ರಕೃತ 16 ಸೀಟುಗಳಲ್ಲಿ ಮುಂದಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ 25 ಕ್ಷೇತ್ರಗಳಲ್ಲಿ ಮುಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
