ನವದೆಹಲಿ:
ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ-ಶಾ ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸುವುದಾಗಿ ಮುಖ್ಯಮಂತ್ರಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಅಕಸ್ಮಾತಾಗಿ ಬಿಜೆಪಿ ಗೆದ್ದರೆ ಚುನಾವಣೆ ತೆಗೆದು ಹಾಕಲು ಸಂಚು ರೂಪಿಸುತ್ತಿದೆ ಎಂದು ಕೂಡ ಅವರು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂವಿಧಾನದ ಬಗ್ಗೆ ಸ್ವಲ್ಪವಾದರೂ ತಿಳುವಳಿಕೆ ಇರುತ್ತಿದ್ದರೆ ಅವರು ಇಂತಹ ಹೇಳಿಕೆ ನೀಡುತ್ತಿರಲಿಲ್ಲ ಎಂದಿದ್ದಾರೆ.
