ನವದೆಹಲಿ:
ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.
ಫೇಸ್ ಬುಕ್ ನ್ನು ದುರ್ಬಳಕೆ ಮಾಡಿದ ಆರೋಪದ ಮೇಲೆ ಸಂಸದೀಯ ಮಂಡಳಿಯ ಸಭೆಯನ್ನು ಕರೆಯುವುದಾಗಿ ತಾವು ಮಾಡಿರುವ ನಿರ್ಧಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಂಸದ ನಿಶಿಕಾಂತ್ ದುಬೆ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಶಿ ತರೂರ್ ನೊಟೀಸ್ ಜಾರಿ ಮಾಡಿದ್ದಾರೆ.