ವಾರಣಾಸಿ:

ಜೂ. ಇಂದಿರಗಾಂಧಿ ಎಂದೇ ಕರೆಸಿಕೊಳ್ಳುವ ಪ್ರಿಯಾಂಕಾ ವಾದ್ರಾ ಅವರು ಚುನಾವಣಾ ಪ್ರಚಾರದ ಭಾಗವಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಂದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ಶುದ್ದೀ ಮಾಡಿದ್ದಾರೆ.
ಗಂಗಾ ತಟದಲ್ಲಿ ಬರುವ ಎಲ್ಲಾ ಲೋಕಸಭಾ ಕ್ಷೇತ್ರಗಳ ಪ್ರಚಾರ ಶುರು ಮಾಡುತ್ತಿರುವ ಪ್ರಿಯಾಂಕ ಗಾಂಧಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು. ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಹೂಗುಚ್ಚ ಇರಿಸಿ ಪ್ರಿಯಾಂಕಾ ತೆರಳಿದರು.ನಂತರ ಸ್ಥಳಕ್ಕೆ ಧಾವಿಸಿದ ಕೆಲ ಬಿಜೆಪಿ ಕಾರ್ಯಕರ್ತರು, ಶಾಸ್ತ್ರಿ ಅವರ ಪ್ರತಿಮೆಗೆ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ್ದಾರೆ, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








