ವಾರ್ಧಾ:
ಪುಲ್ ಗಾಂವ್ ನಲ್ಲಿರುವ ಸೇನಾ ಡಿಪೋದಲ್ಲಿ ಸ್ಫೋಟ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸುನೀಗಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ,ಹೂತಿದ್ದಂತಹ ಸೇನಾ ಆರ್ಟಿಲರಿ ಶೆಲ್ ಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ದುಂರಂತ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಸೇನಾ ಡಿಪೋದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಭಾರತೀಯ ಸೇನಾ ಶಸ್ತ್ರಾಸ್ತ್ರ ನಿರ್ಮಾಣ ಕಾರ್ಖಾನೆಯ ಉದ್ಯೋಗಿ ಹಾಗೂ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ಕು ಮಂದಿ ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ