ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ..!

ನವದೆಹಲಿ:

   ದೇಶದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ  ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಇಂದು 125 ಮತಗಳನ್ನು ಪಡೆಯುವ ಮೂಲಕ  ಅಂಗೀಕಾರವಾಗಿದೆ .

     ಈ ಮೂಲಕ ದೇಶದ ಈಶಾನ್ಯ ಭಾಗದ ಕೆಂಗಣ್ಣಿಗೆ ಗುರಿಯಾಗಿದ್ದ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿಯೂ ಅಂಗೀಕಾರ ಮಾಡಿವೆ ಮತ್ತು ಮಸೂದೆ ಕಾನೂನಾಗಿ ಮಾರ್ಪಾಡಾಗಿದೆ.ಬೆಳಗ್ಗೆ ಮೇಲ್ಮನೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಸೂದೆಯನ್ನು ಟೇಬಲ್ ಮಾಡಿದ್ದರು ನಂತರದಲ್ಲಿ ನಡೆದ ಸುದೀರ್ಘ ಚರ್ಚೆಯ ನಂತರ ಸದನದ ಸಭಾಧ್ಯಕ್ಷರಾದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಸೂದೆಯನ್ನು ಮತಕ್ಕೆ ಹಾಕಿದರು. ಒಟ್ಟಾರೆ 209 ಸದಸ್ಯರ ಬಲವಿರುವ ರಾಜ್ಯಸಭೆಯಲ್ಲಿ ವಿಧೇಯಕದ ಪರವಾಗಿ 125 ಮತಗಳು ಬಂದರೆ, ವಿರುದ್ಧವಾಗಿ 105 ಮತಗಳು ಚಲಾವಣೆಯಾದವು. ಲೋಕಸಭೆಯಲ್ಲಿ ಮಸೂದೆಯ ಪರವಾಗಿ ನಿಂತಿದ್ದ ಶಿವಸೇನೆ ರಾಜ್ಯಸಭೆಯಲ್ಲಿ ಮತದಾನವನ್ನು ಬಹಿಷ್ಕರಿಸಿದೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link