ದಿಸ್ಪುರ್:
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ಕ್ಷೇತ್ರದ ಅಭಿವೃದ್ಧಿಗಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಆದರೆ ಪ್ರಚಾರಕ್ಕಾಗಿ ಖರ್ಚಿಗಾಗಿ ಮೂತ್ರಪಿಂಡವನ್ನೇ ಮಾರಲು ಮುಂದಾಗಿರುವುದು ಬೆಳಕಿಗೆ ಬಂದಿದೆ.
ಅಸ್ಸಾಂನ ಮೊಡತಿ ಗ್ರಾಮದ ನಿವಾಸಿ 26 ವರ್ಷದ ಸುಕುರ್ ಅಲಿಯೇ ಕಿಡ್ನಿ ಮಾರಲು ಮುಂದಾದ ಅಭ್ಯರ್ಥಿ. ಇವರು ಧುಬ್ರಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರದ ವೆಚ್ಚಕ್ಕೆ ಹಣ ಸಂಗ್ರಹಿಸುತ್ತಿದ್ದೇನೆ. ಒಂದು ವೇಳೆ ಹಣ ಸಂಗ್ರಹಿಸಲು ಸಾಧ್ಯವಾಗದಿದ್ದರೆ ಕಿಡ್ನಿ ಮಾರುತ್ತೇನೆ ಎಂದು ಸುಕುರ್ ಅಲಿ ತಿಳಿಸಿದ್ದಾರೆ.