ಹತ್ರಾಸ್ ಅತ್ಯಾಚಾರ : ಪ್ರಕರಣ ದಾಖಲಿಸಿದ ಸಿಬಿಐ..!

ಲಖನೌ:

    ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. 

    ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಈ ಹಿಂದೆ ಉತ್ತರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಉತ್ತರಪ್ರದೇಶ ಸರ್ಕಾರದ ಶಿಫಾರಸ್ಸನ್ನು ಇದೀಗ ಅಂಗೀಕರಿಸಿರುವ ಕೇಂದ್ರ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

   ಕೇಂದ್ರ ಸರ್ಕಾರ ಶನಿವಾರವಷ್ಟೇ ಸಿಬಿಐ ತನಿಖೆ ಕುರಿತು ಅಧಿಸೂಚನೆ ಹೊರಡಿಸಿದ್ದು, ಪ್ರಕರಣ ಸಂಬಂಧ ಇದೀಗ ಸಿಬಿಐ ಎಫ್ಐಆರ್ ದಾಖಲು ಮಾಡಿಕೊಳ್ಳಲಿದ್ದು, ಎಫ್ಐಆರ್ ದಾಖಲಾದ ಕೂಡಲೇ ತನಿಖಾ ತಂಡಗಳು ವಿಧಿವಿಜ್ಞಾನ ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. 

   2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್​ರೇಪ್​ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದ್ದು, ಸೆ. 14ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋಗಿದ್ದಾಗ ನಾಲ್ವರು ಕಾಮುಕರು ಎಳೆದೊಯ್ದು ಅತ್ಯಾಚಾರ ವೆಸಗಿದ್ದಾರೆ. ಅಲ್ಲದೆ, ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ. ಆಕೆಯ ಬೆನ್ನುಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ. ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್​ ಜಂಗ್​ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap