ಕೇಂದ್ರ ಸಚಿವ ಸಂಪುಟ ಸಮಿತಿಗಳ ಪುನರ್ ರಚನೆ..!!!

ನವದೆಹಲಿ:
     ಕೇಂದ್ರದ ನೂತನ ಸರ್ಕಾರ ನೇಮಕಾತಿ ಸಮಿತಿ ಹಾಗೂ ಭದ್ರತಾ ಸಮಿತಿ ಮತ್ತು ಇನ್ನು ಹಲವು ಸಚಿವ ಸಂಪುಟ ಸಮಿತಿಗಳನ್ನು ಪುನರ್ ರಚನೆ ಮಾಡಿದ್ದು.
   ಕೆಂದ್ರ ಸರಕಾರದ ಹುದ್ದೆಗಳ ನೇಮಕಾತಿ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾತ್ರ ಸದಸ್ಯರಾಗಿದ್ದು.ಸಚಿವ ಸಂಪುಟ ಸಚಿವಾಲಯವು ಈ ಕುರಿತು ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ, ಗೃಹ ಸಚಿವ ಅಮಿತ್ ಶಾ ಅವರನ್ನು ಎಲ್ಲಾ ಎಂಟು ಸಮಿತಿಗಳ ಸದಸ್ಯರನ್ನಾಗಿ ಮಾಡಲಾಗಿದೆ. ಪ್ರಧಾನಿ ಮೋದಿ ಅವರನ್ನು ವಸತಿ ಸಂಬಂಧಿಸಿದ ಹಾಗೂ ಸಂಸದೀಯ ವ್ಯವಹಾರಗಳ ಸಮಿತಿಯಲ್ಲಿ ಸೇರ್ಪಡೆ ಮಾಡಲಾಗಿದೆ.
    ಭದ್ರತಾ ವ್ಯವಹಾರಗಳ ಸಮಿತಿಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಐವರು ಸದಸ್ಯರಿರಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಹಾಗೂ ಕಾರ್ಪೋರೆಟ್ ವ್ಯವಹಾರಗಳ ಸಚಿವೆ ನಿರ್ಮಾಲ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಇರಲಿದ್ದಾರೆ.
     ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಪ್ರಧಾನಿ ಮೋದಿ ಸಹಿತ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಹಾಗೂ ಕಾರ್ಪೋರೆಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸಿತಾರಾಮನ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ನರೇಂದ್ರ ತೋಮರ್, ಸಂವಹನ ಸಚಿವ ರವಿಶಂಕರ್ ಪ್ರಸಾದ್, ಆಹಾರ ಸಂಸ್ಕರಣೆ ಸಚಿವ ಹರಸಿಮ್ರತ್ ಕೌರ್ ಬಾದಲ್, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ಭಾರಿ ಉದ್ಯೋಗ ಖಾತೆ ಸಚಿವ ಅರವಿಂದ್ ಸಾವಂತ್ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಇದ್ದಾರೆ.
     ಹಣಕಾಸು ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸಿತಾರಾಮನ್, ಕೃಷಿ ಸಚಿವ ನರೇಂದ್ರ ತೋಮರ್, ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್, ಆಹಾರ ಸಂಸ್ಕರಣೆ ಸಚಿವೆ ಹರಸಿಮ್ರತ್ ಕೌರ್ ಬಾದಲ್, ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್, ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.
     ಸಂಸದೀಯ ವ್ಯವಹಾರಗಳ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಹಾಗೂ ಕಾರ್ಪೋರೆಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸಿತಾರಾಮನ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸವಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ನರೇಂದ್ರ ತೋಮರ್, ಸಂವಹನ ಸಚಿವ ರವಿಶಂಕರ್ ಪ್ರಸಾದ್, ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸದಸ್ಯರಾಗಿದ್ದು, ಸಂಸದೀಯ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಹಾಗೂ ವಿ.ಮುರಳೀಧರನ್ ಅವರನ್ನು ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
     ವಸತಿ ಸಂಬಂಧಿಸಿದ ಸಮಿತಿಯನ್ನು ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದು, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸಿತಾರಾಮನ್ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸದಸ್ಯರಾಗಿದ್ದಾರೆ.
    ಪ್ರಧಾನ ಮಂತ್ರಿ ಕಚೇರಿಯಲ್ಲಿ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹಾಗೂ ನಗರ ಕಾರ್ಯ ಮತ್ತು ವಸತಿ ಸಚಿವ ಹರದೀಪ್ ಸಿಂಗ್ ಪುರಿ ಅವರನ್ನು ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ಮಾಡಲಾಗಿದೆ. ಹೂಡಿಕೆ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಧಾನಿಯವರಾಗಿರಲಿದ್ದು, ಗೃಹ ಸಚಿವ ಅಮಿತ್ ಶಾ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸಿತಾರಾಮನ್, ರೈಲ್ವೆ ಸಚಿವ ಪಿಯೂಷ್ ಗೋಯಲ್ ಸಮಿತಿಯಲ್ಲಿದ್ದಾರೆ.
    ಶ್ರಮ ಮತ್ತು ಕೌಶಲ ಅಭಿವೃದ್ಧಿ ಸಮಿತಿಯ ಅಧ್ಯಕ್ಷರನ್ನಾಗಿ ಪ್ರಧಾನಿ ಅವರನ್ನು ನೇಮಕ ಮಾಡಲಾಗಿದ್ದು, ಗೃಹ ಸಚಿವ ಅಮಿತ್ ಶಾ, ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಸಚಿವ ನರೇಂದ್ರ ತೋಮರ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಕೌಶಲ ಅಭಿವೃದ್ಧಿ ಸಚಿವ ಮಹೇಂದ್ರನಾಥ್ ಪಾಂಡೆ, ಕಾರ್ಮಿಕ ಸಚಿವ ಸಂತೋಷ ಗಂಗವಾರ್ ಹಾಗೂ ನಗರ ಕಾರ್ಯ ಮತ್ತು ವಸತಿ ಸಚಿವ ಹರದೀಪ್ ಸಿಂಗ್ ಕೌರ್ ಅವರನ್ನು ಆಯ್ಕೆ ಮಾಡಲಾಗಿದೆ.
   ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆಹಾರ ಸಂಸ್ಕರಣೆ ಸಚಿವ ಹರಸಿಮ್ರತ್ ಕೌರ್ ಬಾದಲ್, ಜವಳಿ ಸಚಿವೆ ಸ್ಮೃತಿ ಇರಾನಿ ಹಾಗೂ ಸಂಸ್ಕೃತಿ ಖಾತೆ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap