ಬೋಡೋ ಉಗ್ರರೊಂದಿಗೆ ಒಪ್ಪಂದ ಮಾಡಿಕೊಂಡ ಕೇಂದ್ರ ಸರ್ಕಾರ..!

ನವದೆಹಲಿ:

    ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ನಿಷೇಧಿತ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ ನ ಎಲ್ಲ ಬಣಗಳ ಪ್ರತಿನಿಧಿಗಳೊಂದಿಗೆ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಶಾಂತಿ ಸ್ಥಾಪನೆಗೆ ಮುಂದಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 
  
   ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಅವರ ಸಮ್ಮುಖದಲ್ಲಿ  ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಮತ್ತು ಬೋಡೋ ಪ್ರತಿನಿಧಿಗಳ ನಡುವಿನ ಒಪ್ಪಂದ ಐತಿಹಾಸಿಕವಾಗಿದೆ. ಒಪ್ಪಂದವು ಅಸ್ಸಾಂ ರಾಜ್ಯ ಮತ್ತು ಬೋಡೋ ಸಮುದಾಯ ಜನರಿಗೆ ಸುವರ್ಣ ಭವಿಷ್ಯ ರೂಪಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
  
    ಬೋಡೋ ಉಗ್ರರ ಸಂಘಟನೆ ಅನೇಕ ವರ್ಷಗಳಿಂದ ನಡೆಸುತ್ತಿದ್ದ ಹಿಂಸಾಚಾರ ಈ ಒಪ್ಪಂದದಿಂದ ಕೊನೆಗೊಳ್ಳ ಲಿದೆ. ಜ 30ರಂದು 1550 ಉಗ್ರ ಸಂಘಟನೆಗಳ ಸದಸ್ಯರು 130 ಶಸ್ತ್ರಾಸ್ತ್ರಗಳೊಂದಿಗೆ ಶರಣಾಗಲಿದ್ದಾರೆ .ಶರಣಾಗತಿಯಾಗುವ ಉಗ್ರರಿಗೆ ನೀಡಿರುವ ಭರವಸೆಯನ್ನು ಕಾಲಮಿತಿಯಲ್ಲಿ ಈಡೇರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವನಾಗಿ ಹೇಳಲು ಇಚ್ಛಿಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap