ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ…!!!

ನವದೆಹಲಿ  

      ಲೋಕಸಭಾ ಚುನಾವಣೆ ಕೇವಲ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 

      ಶೇ.3ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ  ಇದರಿಂದಾಗಿ 48.41 ಲಕ್ಷ ನೌಕರರು ಹಾಗೂ 62.03 ಲಕ್ಷ ಪಿಂಚಣಿದಾರರು ಸೇರಿದಂತೆ 1.1 ಕೋಟಿ ಮಂದಿ ಇದರ ಪ್ರಯೋಜನ ಪಡೆಯಲ್ಲಿದ್ದಾರೆ . ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ಕೈಗೊಳ್ಳಲಾಗಿದೆ.

     ಈಗಿರುವ ಶೇ.9ರಷ್ಟು ತುಟ್ಟಿಭತ್ಯೆಯ ಜೊತೆಗೆ ಹೆಚ್ಚುವರಿ ಶೇ.3 ರಷ್ಟು ಭತ್ಯೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link