ದೇಶದ ಜನತೆಗಾಗಿ 1.70 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ

ನವದೆಹಲಿ:

     ಕೊರೋನಾ ವೈರಸ್ ಸೋಂಕು ತಡೆಗಾಗಿ ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶದ ನಾಗರಿಕ ರಿಗೆ ಕೇಂದ್ರ ಸರ್ಕಾರ ಆಪತ್ಕಾಲ ನಿಧಿಯಾಗಿ 1.70 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ವೈರಸ್‌ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ.

    ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರವು ಬಡವರನ್ನು ರೈತರನ್ನು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರನ್ನು ನೆಮ್ಮದಿಯಾಗಿ ಬದುಕಲು ಅನುವು ಮಾಡಿಕೊಡುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19 ರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಹೆಚ್ಚು ಗಂಭೀರವಾಗಿ ಮತ್ತು ಚುರುಕಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗುತ್ತದೆ.

     ಬಡವರ ಹಸಿವಿನ ಅರ್ಥ ಅರಿತುಕೊಂಡ ಸರ್ಕಾರವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಗೋಧಿ ಅಥವಾ ಅಕ್ಕಿ ಮತ್ತು 1 ಕೆ.ಜಿ. ಬೇಳೆಯನ್ನು ಕೊಡಲು ನಿರ್ಧರಿಸಿದ್ದು ಒಂದು ದೊಡ್ಡ ಅಸಾಧಾರಣ ನಿರ್ಧಾರವನ್ನು ತೆಗೆದುಕೊಂಡಿದೆ.

      ಮಹಿಳೆಯರ ಜನಧನ್ ಖಾತೆಗೆ ಪ್ರತಿ ತಿಂಗಳು ರೂ.500 ರಂತೆ 3 ತಿಂಗಳಿಗೆ ರೂ. 1500/- ಗಳನ್ನು ಮುಂಗಡವಾಗಿ ಹಣ ನೇರವಾಗಿ ವರ್ಗಾವಣೆ ಮಾಡುವುದು, ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿನ ರೂ. 2,000 ಹಣವನ್ನು ಮುಂಗಡವಾಗಿ ಕೊಡುವುದು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಯೋಜನೆ ರೂ. 10 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದು ಇದರಿಂದ 63 ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ಲಾಭವಾಗಲಿದೆ. 8.3 ಕೋಟಿ ಗೃಹಿಣಿಯರಿಗೆ ಉಜ್ವಲ್ ಯೋಜನೆ ಅಡಿ 3 ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದು, ಸಂಘಟಿತ ವಲಯದ ಕಾರ್ಮಿಕರಿಗೆ ಇ.ಪಿ.ಎಫ್. ಮೇಲೆ ಸಾಲ ಸೌಲಭ್ಯ ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಅಡಿ ಕೂಲಿ ದರವನ್ನು ರೂ.182 ರಿಂದ ರೂ.202 ಏರಿಸಿದ್ದು, ದೇಶದ ಬಡವರು ಇಂತಹ ಸಂದಿಗ್ಧ ಸಮಯದಲ್ಲಿ ಹಸಿವಿನಿಂದ ಬಳಲದಂತೆ ಮಾಡುತ್ತದೆ.

     ಇದರ ಜೊತೆಗೆ ವಯೋವೃದ್ಧರಿಗೆ, ವಿಧವೆಯರಿಗೆ ರೂ.1000/- ಗೌರವಧನವನ್ನು 3 ತಿಂಗಳವರೆಗೆ ಕೊಡುವುದು ಒಳ್ಳೆಯ ನಿರ್ಧಾರ. ಇದಲ್ಲದೇ ಕೇಂದ್ರ ಸರ್ಕಾರದಿಂದ ಉದ್ಯಮ ವಲಯಕ್ಕೆ ಹಲವಾರು ಹಣಕಾಸು ಸಹಾಯಕ ಯೋಜನೆಗಳನ್ನು ಕೊಡಮಾಡಿ ಕೋವಿಡ್-19 ಮಹಾಮಾರಿಯ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವಲ್ಲಿ ಸಹಕಾರಿಯಾಗಲಿದೆ.

ಬಡವರಿಗೆ ಇಷ್ಟೊಂದು ದೊಡ್ಡಮಟ್ಟದ ಹಣಕಾಸು ಸಹಾಯ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದರ ಮೋದಿಯವರಿಗೆ ಇನ್ನೊಮ್ಮೆ ಅಭಿನಂದಿಸುತ್ತೇನೆ? ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap