ನವದೆಹಲಿ:

ದೇಶದಲ್ಲಿ ಕಳೆದ ನಾಲ್ಕುವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗಿಂತ ರಾಮಮಂದಿರ ನಿರ್ಮಾಣದ್ದೇ ಚಿಂತೆಯಾಗಿದೆ ಮತ್ತು ಮೋದಿ ಸರ್ಕಾರ ದೇಶದ ರೈತರಿಗೆ ಬೆಳೆವಿಮೆ ಹೆಸರಿನಲ್ಲಿ ಮೋಸ ಮಾಡಲು ಹೊರಟಿದೆ ಮತ್ತು ಅವರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ಬಹಿರಂಗ ಸಭೆಯನ್ನು ಉದ್ದೇಶಿಸಿ ಮತನಾಡಿದ ಅವರು, ಕೇಂದ್ರ ಸರ್ಕಾರದಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿಲ್ಲ ಮತ್ತು ಅಯೋದ್ಯೆಯ ರಾಮ ಮಂದಿರಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ದೂರುವ ಮೂಲಕ ಕೇಂದ್ರದ ಮೇಲೆ ಹರಿಹ್ದಾದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
