ಕೇಂದ್ರ ಸರ್ಕಾರ ಸುಳ್ಳನ್ನೇ ಸತ್ಯ ಎಂದು ನಂಬಿಸಲು ಪ್ರಯತ್ನಿಸುತ್ತಿದೆ :ರಾಹುಲ್ ಗಾಂಧಿ

ನವದೆಹಲಿ:

        ಕೇಂದ್ರ ಸರ್ಕಾರದ ವಿರುದ್ಧ ನಿರತರ ವಾಗ್ದಾಳಿ ನಡೆಸುತ್ತಲೇ ಬಂದಿರುವ ರಾಹುಲ್​ ಗಾಂಧಿ ಅವರು ಇಂದು ಮತ್ತೆ ಟ್ವೀಟ್​ ಮೂಲಕ  ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.

      ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು  ಮೂರು ವಿಚಾರಗಳಲ್ಲಿ ಸುಳ್ಳುಗಳನ್ನೇ ಸತ್ಯವೆಂದು ನಂಬಿಸುತ್ತಿದೆ. ಕೊವಿಡ್​ 19 ಸಾಂಕ್ರಾಮಿಕ ರೋಗ, ಭಾರತದ ಆರ್ಥಿಕತೆ ಮತ್ತು ಭಾರತ-ಚೀನಾ ಗಡಿ ಬಿಕ್ಕಟ್ಟು ಈ ಮೂರು ವಿಷಯಗಳಲ್ಲಿ ಕೇಂದ್ರ ಸರ್ಕಾರ ಸುಳ್ಳುಗಳನ್ನೇ ಸಾಂಸ್ಥಿಕಗೊಳಿಸಿ, ಅದನ್ನೇ ಜನರ ತಲೆಯಲ್ಲಿ ತುಂಬುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

      ಕೊವಿಡ್​-19 ಟೆಸ್ಟ್​ಗಳ ಮೇಲೆ ನಿರ್ಬಂಧ ಹೇರಲಾಗುತ್ತಿದೆ ಹಾಗೂ ಸಾವುಗಳ ಬಗ್ಗೆ ತಪ್ಪಾಗಿ ವರದಿ ನೀಡಲಾಗುತ್ತಿದೆ. ಇನ್ನು ಆರ್ಥಿಕತೆ ವಿಚಾರಕ್ಕೆ ಬಂದರೆ ಕೇಂದ್ರ ಸರ್ಕಾರ ಹೊಸ ಲೆಕ್ಕಾಚಾರ ವಿಧಾನವನ್ನೇ ಅಳವಡಿಸಿಕೊಂಡು, ಜಿಡಿಪಿ ಬಗ್ಗೆ ಸುಳ್ಳು ಹೇಳುತ್ತಿದೆ. ಹಾಗೇ ಮೂರನೇಯದಾಗಿ ಮಾಧ್ಯಮಗಳನ್ನು ಬೆದರಿಸುವ ಮೂಲಕ ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಸಂಬಂಧಪಟ್ಟ ವಾಸ್ತವವನ್ನು ಮುಚ್ಚಿಡುತ್ತಿದೆ ಎಂದು ರಾಹುಲ್​ ಗಾಂಧಿ ಟ್ವೀಟ್ ಮಾಡಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap