ನವದೆಹಲಿ:
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್’ಡಿಎ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ‘ನವ ಭಾರತ’ ನಿರ್ಮಾಣಕ್ಕಾಗಿ ಅವಿರತವಾಗಿ ಆ ನಿಟ್ಟಿನಲ್ಲೆ ದುಡಿಯುತ್ತಿದ್ದು, ಜನರಿಗೆ ಹೊಸ ಭವ್ಯ ಭಾರತದ ಭರವಸೆ ನೀಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತಮ್ಮ ಪ್ರಸ್ತಾವಿಕ ಭಾಷಣದಲ್ಲಿ ತಿಳಿಸಿದ್ದಾರೆ.
ಪ್ರತೀ ಕ್ಷೇತ್ರದಲ್ಲಿರುವ, ಎಲ್ಲಾ ರೀತಿಯ ಜನರ ಭರವಸೆಗಳು ಹಾಗೂ ಆಸೆಗಳನ್ನು ಈಡೇರಿಸಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ . ಮುಸ್ಲಿಂ ಮಹಿಳೆಯರು ಯಾವುದೇ ರೀತಿಯ ಭಯವಿಲ್ಲದೆ ಜೀವನ ನಡೆಸುವ ಸಲುವಾಗಿ, ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ ತ್ರಿವಳಿ ತಲಾಖ್ ರದ್ದತಿ ಮಸೂದೆ ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. 2014ರ ಲೋಕಸಭಾ ಚುನಾವಣೆಗೂ ಮುನ್ನ ದೇಶ ಅನಿಶ್ಚಿತತೆಯತ್ತ ಸಾಗುತ್ತಿತ್ತು. ಚುನಾವಣೆ ಪೂರ್ಣಗೊಂಡ ಬಳಿಕ ನಮ್ಮ ಸರ್ಕಾರ ನವ ಭಾರತ ನಿರ್ಮಾಣಕ್ಕಾಗಿ ದುಡಿಯಲು ಆರಂಭಿಸಿತು ಎಂದು ಹೇಳಿದ್ದಾರೆ.
ಸರ್ಕಾರ ಇಲ್ಲಿಯವರೆಗೂ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ನಂಬಿಕೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ತನ್ನ ಸಕಲ ಪ್ರಯತ್ನ ನಡೆಸುತ್ತಲೇ ಇದೇ. ಪ್ರಧಾನಮಂತ್ರಿ ಜೀವನ್ ವಿಮಾ ಯೋಜನೆ ಸುಮಾರು 21 ಕೋಟಿ ಜನರಿಗೆ ಲಾಭದಾಯಕವಾಗಿದೆ . ಪ್ರಧಾನಮಂತ್ರಿ ಸೌಭಾಗ್ಯ ಯೋಜನೆಯಡಿಯಲ್ಲಿ 2ಕೋಟಿಗೂ ಹೆಚ್ಚು ಮನೆಗಳಿಗೆ ವಿದ್ಯುತ್ ಲಭಿಸಿದೆ. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಸರ್ಕಾರ ಈ ವರೆಗೂ 9 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿದೆ. ಎಂದು ಸರ್ಕಾರದ ಸಾಧನೆಗಳ ಪಟ್ಟಿಯನ್ನು ದೇಶದ ಮುಂದಿರಿಸಿದ್ದಾರೆ.