ನವದೆಹಲಿ:
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತಂತೆ ಅವರೇ ಟ್ವೀಟ್ ಮಾಡಿದ್ದು, ನನ್ನ ಕೊರೋನಾ ವೈರಸ್ ಸೋಂಕು ಪರೀಕ್ಷೆ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯ ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಒಂದು ವಾರದಿಂದೀಚೆಗೆ ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.